ಸುಬ್ರಹ್ಮಣ್ಯ : ನೂತನವಾಗಿ ಶುಭಾರಂಭಗೊಳ್ಳುತ್ತಿರುವ ಪ್ರಧಾನಮಂತ್ರಿ ಭಾರತೀಯ ಜನಔಷಧ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವೂ ಜು.7 ರಂದು ಸುಬ್ರಹ್ಮಣ್ಯ ಕಾಶಿಕಟ್ಟೆಯ ಗ್ರಾಮ ಪಂಚಾಯತ್ ಕಟ್ಟಡದಲ್ಲಿ ನಡೆಯಲಿದೆ.
ಜನಔಷಧ ಕೇಂದ್ರದ ಉದ್ಘಾಟಕರಾಗಿ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವರಾದ ಎಸ್. ಅಂಗಾರ ಆಗಮಿಸಲಿದ್ದಾರೆ. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರು ವಹಿಸಲಿದ್ದಾರೆ ಹಾಗೂ ಮುಖ್ಯ ಅತಿಥಿಗಳಾಗಿ ಬಿಪಿಪಿಐ ಸಹಾಯ ವ್ಯವಸ್ಥಾಪಕರಾದ ಡಾ.ಅನಿಲಾ ದೀಪಕ್, ಕಡಬ ತಾಲೂಕು ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷರಾದ ರಾಜೇಶ್ವರಿ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲಲಿತಾ, ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಮೋಹನ್ ರಾಮ್ ಆಗಮಿಸಲಿದ್ದಾರೆ ಎಂದು ಸಂಸ್ಥೆಯ ಮಾಲಕರಾದ ಶಿವರಂಜನ್ ಎಮ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.