ಮಂಗಳೂರು: ಕೃಷಿ ಮಾರುಕಟ್ಟೆ ಹಾಗೂ ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಮಂಗಳೂರಿನ ಜಿಲ್ಲಾ ಸಹಕಾರಿ ಬ್ಯಾಂಕ್ ವತಿಯಿಂದ ಇಂದು ನಡೆದ ರೈತ ಸ್ಪಂದನ ಕಾರ್ಯಕ್ರಮದಡಿ 2021-22ನೇ ಸಾಲಿಗೆ ವಿವಿಧ ಕೃಷಿಸಾಲ ಸೌಲಭ್ಯಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು, ಧಾರ್ಮಿಕ ದತ್ತಿ ಹಾಗೂ ಧರ್ಮಾದಾಯ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸ್ಥಳೀಯ ಶಾಸಕರಾದ ವೇದವ್ಯಾಸ ಕಾಮತ್, ಶಾಸಕರಾದ ಭರತ್ ಶೆಟ್ಟಿ, ಉಮನಾಥ್ ಕೋಟ್ಯಾನ್, ಮೇಯರ್ ಪ್ರೇಮಾನಂದ ಶೆಟ್ಟಿ, ಶಶಿಕುಮಾರ್ ಬೈಲೊಟ್ಟು, ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಇತರೆ ಗಣ್ಯರು, ಸಹಕಾರಿಗಳು ಉಪಸ್ಥಿತರಿದ್ದರು.