ಚಿಕ್ಕಮಗಳೂರು : ಶೃಂಗೇರಿಯ ಬ್ಯೂಟಿ ಪಾರ್ಲರ್ ಮಹಿಳೆಯ ಮೇಲೆ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಚಿಕ್ಕಮಗಳೂರಿನ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ಈ ಮಹತ್ವದ ತೀರ್ಪು ನೀಡಿದೆ. ನ್ಯಾಯಾಧೀಶ ಮಂಜುನಾಥ ಸಂಗ್ರೇಶಿ ತೀರ್ಪು ಆದೇಶ ನೀಡಿದ್ದಾರೆ.
ಏಪ್ರಿಲ್ 18, 2015 ರಂದು ಗಣೇಶ್, ಕಬೀರ್, ವಿನೋದ್, ಅಬ್ದುಲ್ ಮಜೀದ್ ಎಂಬ ನಾಲ್ಕು ಮಂದಿ ಶೃಂಗೇರಿಯ ಮೆಣಸೆಯಲ್ಲಿ ಬ್ಯೂಟಿ ಪಾರ್ಲರ್ ಕೆಲಸ ಮುಗಿಸಿಕೊಂಡು ಬರುವ ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಿತ್ತು. ಆರು ವರ್ಷಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಇದೀಗ ನಾಲ್ವರಿಗೆ ಶಿಕ್ಷೆ ಪ್ರಕಟವಾಗಿದೆ.