ವಿಟ್ಲ : ಕರ್ನಾಟಕ ಗೋಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣೆ ವಿದೇಯಕ ಯಥಾವತ್ತು ಜಾರಿ ಮಾಡಿ ಅಕ್ರಮ ಗೋ ಸಾಗಾಣಿಕೆ ಮತ್ತು ಗೋ ಹತ್ಯೆ ತಡೆಯಲು ಸೂಕ್ತ ಕಾನೂನು ಕ್ರಮಕ್ಕೆ ಹಾಗೂ ಹೊಸ ಗೋ ರಕ್ಷಕ ಕಾಯಿದೆ ಬಳಸಿ ಗೋವಂಶ ಕುರ್ಬಾನಿ ತಡೆಯಲು ಮತ್ತು ಸೂಕ್ತ ಸ್ಥಳಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವಿಟ್ಲ ಪ್ರಖಂಡ ವತಿಯಿಂದ ಜು.17 ರಂದು ವಿಟ್ಲ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಲಾಯಿತು.