ಬೆಂಗಳೂರು: ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಫಲಿತಾಂಶ ಜು.20ರಂದು ಸಂಜೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ದ್ವಿತೀಯ ಪಿಯುಸಿ ಫಲಿತಾಂಶವು ಜು.20ರಂದು ಸಂಜೆ 4.30ಕ್ಕೆ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದೆ. ಗ್ರೇಡ್ ಬದಲು ಅಂಕಗಳನ್ನೇ ನೀಡಲು ಪಿಯು ಬೋರ್ಡ್ ತೀರ್ಮಾನಿಸಿದ್ದು, ಫಲಿತಾಂಶವು ಅಂಕಗಳ ಮಾದರಿಯಲ್ಲಿ ಪ್ರಕಟವಾಗಲಿದೆ.
“ವಿದ್ಯಾರ್ಥಿಗಳಿಗೆ ಅಂಕ ನೀಡಲು ವಿದ್ಯಾರ್ಥಿಯು ಪ್ರಥಮ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಶೇ.45 ಅಂಕ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಡೆದ ಶೇ.45 ಅಂಕ ಹಾಗೂ ಇಂಟರ್ನಲ್ ಅಸೆಸ್ಮೆಂಟ್‌ನಲ್ಲಿ ಶೇ.10 ಅಂಕಗಳ ಆಧಾರದ ಮೇಲೆ ಈ ವರ್ಷ ಪಿಯುಸಿ ಬೋರ್ಡ್ ಫಲಿತಾಂಶ ಪ್ರಕಟ ಮಾಡಲಿದೆ.
ಫಲಿತಾಂಶ ನೋಡಲು ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ ಪಡದುಕೊಳ್ಳಬೇಕು. ಇಲಾಖೆಯ ವೆಬ್ ಸೈಟ್‌ನಲ್ಲಿ Know my registration number ‘ಲಿಂಕ್ ನೀಡಿ ಪ್ರತಿ ವಿದ್ಯಾರ್ಥಿಗಳು ಆ ಲಿಂಕ್‌ನ ಮೂಲಕ ನೋಂದಣಿ ಸಂಖ್ಯೆ ಪಡೆಯಬಹುದು” ಎಂದು ಅವರು ಮಾಹಿತಿ ನೀಡಿದ್ದಾರೆ.





























