ವಿಟ್ಲ : ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ಬ್ಯಾಂಕ್ ನ ಸಹಾಯಕ ನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಕಾಂತ್ ಬಳ್ಳಾಲ್(57) ರವರು ಅಲ್ಪಕಾಲದ ಅಸೌಖ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜು.21 ರಂದು ನಿಧನರಾದರು.
ಶ್ರೀಕಾಂತ್ ಬಳ್ಳಾಲ್ ರವರು ದ್ವಿತೀಯ ದರ್ಜೆ ಗುಮಾಸ್ತನಾಗಿ ಬ್ಯಾಂಕ್ ಗೆ ನಿಯತಿಗೊಂಡು ತದನಂತರದ ದಿನಗಳಲ್ಲಿ ಪ್ರಥಮ ದರ್ಜೆ ಗುಮಾಸ್ತನಾಗಿ ಭಡ್ತಿ ಹೊಂದಿ ನಂತರ ಶಾಖಾ ವ್ಯವಸ್ಥಾಪಕ ಹಾಗೂ ಮಾರಾಟ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ, ನಂತರದ ದಿನಗಳಲ್ಲಿ ಲೆಕ್ಕಾಧಿಕಾರಿಯಾಗಿ ಕಾರ್ಯಾನಿರ್ವಹಿಸಿ, 1/1/2019 ರಿಂದ ಸಹಾಯಕ ನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಬ್ಯಾಂಕ್ ನ ಅಧ್ಯಕ್ಷರಾದ ಜಗನಾಥ್ ಸಾಲಿಯಾನ್, ಉಪಾಧ್ಯಕ್ಷ ಮೋಹನ್ ಭಟ್, ಬ್ಯಾಂಕ್ ನ ನಿರ್ದೇಶಕರು ಹಾಗೂ ಬ್ಯಾಂಕ್ ಸಿಬ್ಬಂಧಿಗಳು ಶ್ರೀಕಾಂತ್ ಬಳ್ಳಾಲ್ ರವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಮೃತರು ಪತ್ನಿ ಹಾಗೂ ಓರ್ವ ಮಗನನ್ನು ಅಗಲಿದ್ದಾರೆ.