ಪುತ್ತೂರು: ಕುಂಡಡ್ಕ- ಮುಕ್ಕೂರು ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ಇದರ 2021-23 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ಕೂರಿನಲ್ಲಿ ಜು.20 ರಂದು ನಡೆಯಿತು.
ಗೌರವಧ್ಯಕ್ಷರಾಗಿ ಜಗನ್ನಾಥ ಪೂಜಾರಿ ಮುಕ್ಕೂರು, ಅಧ್ಯಕ್ಷರಾಗಿ ಜಯಂತ ಕುಂಡಡ್ಕ, ಕಾರ್ಯದರ್ಶಿಯಾಗಿ ಶಶಿಕುಮಾರ್ ಬಿ.ಎನ್., ಕೋಶಾಧಿಕಾರಿಯಾಗಿ ಜೀವನ್ ಕೊಂಡೆಪ್ಪಾಡಿ ಆಯ್ಕೆಯಾದರು.
ನೂತನ ಸಮಿತಿಯನ್ನು ಅಭಿನಂದಿಸಿ ಮಾತನಾಡಿದ ಗೌರವಾಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಸಮಾಜಮುಖಿ ಕಾರ್ಯಚಟುವಟಿಕೆಗಳೊಂದಿಗೆ ಸಂಘವನ್ನು ಮುನ್ನೆಡೆಸೋಣ. ಈ ಬಾರಿಯ12 ವರ್ಷದ ಗಣೇಶೋತ್ಸವ ಆಚರಣೆಯನ್ನು ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ವಿಶಿಷ್ಟ ರೀತಿಯಲ್ಲಿ ಆಚರಿಸಲು ಯೋಜನೆ ರೂಪಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ, ಕಾರ್ಯದರ್ಶಿ ರಕ್ಷಿತ್ ಗೌಡ ಕಾನಾವು, ನೇಸರ ಯುವಕ ಮಂಡಲ ಅಧ್ಯಕ್ಷ ರಮೇಶ್ ಕಾನಾವು, ಕುಂಞಣ್ಣ ನಾಯ್ಕ ಅಡ್ಯತಕಂಡ, ಮಹೇಶ್ ಕುಂಡಡ್ಕ, ವೆಂಕಟರಮಣ, ರವಿ ಮೊದಲಾದವರು ಉಪಸ್ಥಿತರಿದ್ದರು.