ಬೆಂಗಳೂರು: ರಾಜ್ಯದ ಕರಾವಳಿ ಭಾಗಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು ಜು.21,22 ಮತ್ತು 23ರವರೆಗೆ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ದಾವಣಗೆರೆ, ಕೊಡಗು, ಮೈಸೂರು, ಬಾಗಲಕೋಟೆ, ಬೀದರ್ ಬೆಳಗಾವಿ, ಧಾರವಾಡ, ಕಲಬುರಗಿಯಲ್ಲಿ ಕೂಡ ಮಳೆಯಾಗುವ ಸಂಭವವಿದ್ದು ಮುಂಜಾಗ್ರತೆಯಿಂದ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನಗಳವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.