ಸಕಲೇಶಪುರ: ಕರ್ನಾಟಕದ ಕರಾವಳಿ, ಮಲೆನಾಡು ಸೇರಿದಂತೆ ಅನೇಕ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು ಇದರ ಪರಿಣಾಮ ಶಿರಾಡಿ ಘಾಟ್ ನ ಮಾರ್ನಳ್ಳಿ ಬಳಿ ಭೂ ಕುಸಿತ ಉಂಟಾಗಿದ್ದು ರಸ್ತೆ ಸಂಪೂರ್ಣ ಬಿರುಕುಬಿಟ್ಟಿದೆ.
ಎಡೆ ಬಿಡದೆ ಸುರಿಯುತ್ತಿರುವ ಮಳೆಯಿಂದ ಮಂಗಳೂರು-ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುವ ಶಿರಾಡಿಘಾಟ್ ರಸ್ತೆಯ ಒಂದು ಬದಿಯ ಮಣ್ಣು ಸಂಪೂರ್ಣ ಕುಸಿದಿದ್ದು, ಇದರ ಪರಿಣಾಮ ರಸ್ತೆ ಬಿರುಕುಬಿಟ್ಟಿದೆ.
ಬೆಂಗಳೂರು ಹಾಗೂ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ನಿರಂತರ ಮಳೆಯಿಂದಾಗಿ ರಸ್ತೆ ಕುಸಿತ ಉಂಟಾಗಿದೆ. ಸದ್ಯ ಈ ಮಾರ್ಗದಲ್ಲಿ ಘನ ವಾಹನ ಸಂಚಾರ ಬಂದ್ ಆಗಿದ್ದು, ಪ್ರಯಾಣಿಕರು ಪರ್ಯಾಯ ಮಾರ್ಗದ ಮೊರೆ ಹೋಗಿದ್ದಾರೆ.