ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಯವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಭಾವಚಿತ್ರ ಹಾಗೂ ಪ್ರಸಾದವನ್ನು ನೀಡಿ ಶಾಲು ಹೊದಿಸಿ ಅಭಿನಂದಿಸಿದರು.
ರಾಜ್ಯವನ್ನು ಸಮರ್ಥವಾಗಿ ಮುನ್ನಡೆಸಲು ಆಶೀರ್ವದಿಸಿ ಅನುಗ್ರಹಿಸಲಿ ಎಂದು ಪ್ರಾರ್ಥಿಸಿ ಮಂಜುನಾಥ ಸ್ವಾಮಿಯ ಪ್ರಸಾದವನ್ನು ನೀಡಲಾಯಿತು ಎಂದು ಹರೀಶ್ ಪೂಂಜಾ ರವರು ತಿಳಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಉತ್ತರದ ಶಾಸಕರಾದ ಡಾ. ಭರತ್ ಶೆಟ್ಟಿ ಹಾಗೂ ಮಂಗಳೂರು ದಕ್ಷಿಣದ ಶಾಸಕ ವೇದವ್ಯಾಸ ಕಾಮತ್ ಉಪಸ್ಥಿತರಿದ್ದರು.