ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ದ.ಕ.ದಲ್ಲಿ ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು
ಆಗಸ್ಟ್ 10ರವರೆಗೆ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ.
ಮದುವೆ ಕಾರ್ಯಕ್ರಮಗಳಿಗೆ ಕೇವಲ 50 ಜನರಿಗೆ ಅವಕಾಶ, ಹೆಚ್ಚಿನ ಜನ ಸೇರಿಸಿದ್ದಲ್ಲಿ ಕಲ್ಯಾಣ ಮಂಟಪ ಮಾಲಕರ ಮೇಲೆ ಎಫ್‌ಐಆರ್,ಮಾಸ್ಕ್ ಧರಿಸದೇ ಇದ್ದಲ್ಲಿ ದಂಡ ವಿಧಿಸಲು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಪತ್ತು ನಿರ್ವಹಣಾ ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಪಾಲ್ಗೊಂಡಿದ್ದರು. ಹಾಗೆಯೇ ಶಾಸಕರುಗಳಾದ ಡಾ. ವೈ ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ್ ಶೆಟ್ಟಿ, ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ ವಿ, ಮಹಾನಗರಪಾಲಿಕೆ ಆಯುಕ್ತರು, ಜಿಲ್ಲಾ ಪಂಚಾಯತ್ ಸಿಇಓ ಕುಮಾರ್, ಆರೋಗ್ಯಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.