ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮೂರನೇ ಅಲೆ ಭೀತಿ ಆತಂಕದ ಹಿನ್ನಲೆ ಮತ್ತೇ ನೈಟ್ ಕರ್ಫ್ಯೂ ಘೋಷಿಸಲಾಗಿದೆ. ಇಂದಿನಿಂದ ನೈಟ್ ಕರ್ಪ್ಯೂ ಜಾರಿಯಾಗಲಿದ್ದು, ರಾತ್ರಿ 10 ಗಂಟೆ ನಂತರ ಅನಗತ್ಯವಾಗಿ ರಸ್ತೆಗಿಳಿಯುವ ಸಾರ್ವಜನಿಕರ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ಮತ್ತು ಪೊಲೀಸ್ ಇಲಾಖೆ ತಿಳಿಸಿದೆ.

ಸೋಂಕು ಹೆಚ್ಚಳ ಆತಂಕ ಹಿನ್ನೆಲೆ ಬಿಬಿಎಂಪಿ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ಕಟ್ಟುನಿಟ್ಟಿನ ನೈಟ್ ಕರ್ಪ್ಯೂ ಜಾರಿ ಮಾಡಲಾಗಿದ್ದು, ವಿಪತ್ತು ನಿರ್ವಹಣಾ ಕಾಯ್ದೆಯಡಿ ಕೇಸ್ ದಾಖಲಿಸಲಿಸುವುದಾಗಿ ಪೊಲೀಸರು ತಿಳಿಸಿದ್ದು ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಓಡಾಡೋರಿಗೆ ಬಿಸಿ ಮುಟ್ಟಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಪೊಲೀಸರು, ಮಾರ್ಷಲ್ ನೇತೃತ್ವದಲ್ಲಿ ಇಂದಿನಿಂದ ಕಾರ್ಯಾಚರಣೆ ಆರಭವಾಗುತ್ತಿದೆ. ಅಗತ್ಯ ವಸ್ತುಗಳ ಸರಬರಾಜು, ಮತ್ತು ವೈದ್ಯಕೀಯ ಸೇವೆಗಳು ಹೊರತುಪಡಿಸಿ ಇನ್ನುಳಿದ ಎಲ್ಲಾ ವ್ಯಾಪಾರ ಹಾಗೂ ವಹಿವಾಟುಗಳ ನಿರ್ಬಂಧವನ್ನ ಕಟ್ಟುನಿಟ್ಟಾಗಿ ಜಾರಿಗೆ ತರಲು ಪೊಲೀಸ್ ಇಲಾಖೆ ಮತ್ತು ಬಿಬಿಎಂಪಿ ಸಜ್ಜುಗೊಂಡಿದೆ.
ಯಾವುದಕ್ಕೆಲ್ಲಾ ವಿನಾಯಿತಿ ??
- ವಿಮಾನ ನಿಲ್ದಾಣಕ್ಕೆ ಹೋಗುವ ವಾಹನಗಳು
- ರೋಗಿಗಳನ್ನ ಆಸ್ಪತ್ರೆಗೆ ಕರೆದೊಯ್ಯುವಾಗ ಸಂಬಂಧಪಟ್ಟವರಿಗೆ ಮಾತ್ರ ಅವಕಾಶ
- ಯಾವುದೇ ಕಂಪನಿ ಹಾಗೂ ಕೈಗಾರಿಕಾ ಉದ್ಯೋಗಿಗಳು (ಕಡ್ಡಾಯವಾಗಿ ಪಾಸ್ ಹೊಂದಿರಬೇಕು)
- ಐಡಿಕಾರ್ಡ್ ಗಳನ್ನ ಹೊಂದಿರುವ ಟೆಲಿಕಾಂ ಹಾಗೂ ಇಂಟರ್ನೆಟ್ ಸರ್ವೀಸ್ ವರ್ಕಸ್
- ತುರ್ತು ವೈದ್ಯಕೀಯ ಹಾಗೂ ಅಗತ್ಯ ಸರಬರಾಜು ವಾಹನಗಳಿಗೆ ಅವಕಾಶ
- ಅಗತ್ಯ ಸರಕು ಸಾಗಾಟ ವಾಹನಗಳಿಗೆ ಅವಕಾಶ
ವಿಮಾನ, ರೈಲ್ವೆ ಪ್ರಯಾಣಕ್ಕೆ ಸಂಬಂಧಿತ ಓಡಾಟಕ್ಕೆ ಸೂಕ್ತ ಮಾಹಿತಿ ಒದಗಿಸಬೇಕು