ಟೋಕಿಯೋ :
13 ವರ್ಷದ ಬಳಿಕ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಚಿನ್ನದ ಪದಕ ಲಭಿಸಿದೆ.
ಪುರುಷರ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಬಂಗಾರದ ಪದಕ ಗೆದ್ದುಕೊಂಡಿದ್ದಾರೆ. ಇಂದು ಸಂಜೆ ನಡೆದ ಫೈನಲ್ ಪಂದ್ಯದಲ್ಲಿ ನೀರಜ್ ಅತ್ಯುತ್ತಮ ಪ್ರದರ್ಶನ ತೋರಿದರು. ಮೊದಲ ಪ್ರಯತ್ನದಲ್ಲಿ 87.03, ಎರಡನೆ ಪ್ರಯತ್ನದಲ್ಲಿ 87.58 ಮೀಟರ್ ಜಾವೆಲಿನ್ ಎಸೆದರು. ಮೂರನೇ ಪ್ರಯತ್ನದಲ್ಲಿ 76.79 ಮೀಟರ್ ಎಸೆದರು.
2008 ರ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ ನೂರು ಮೀಟರ್ ಏರ್ ರೈಫಲ್ ಶೂಟಿಂಗ್ ನಲ್ಲಿ ಅಭಿನವ್ ಬಿಂದ್ರಾ ಚಿನ್ನದ ಪದಕ ಗೆದ್ದುಕೊಂಡು ಇತಿಹಾಸ ನಿರ್ಮಿಸಿದ್ದರು.