ಬೆಂಗಳೂರು: ಇಂದು ಮಧ್ಯಾಹ್ನ 3:30ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಫಲಿತಾಂಶ ಪ್ರಕಟಿಸಲಿದ್ದು, ವಿದ್ಯಾರ್ಥಿಗಳು ಕುತೂಹಲದಿಂದ ಕಾಯುತ್ತಿದ್ದಾರೆ. ಇಂದು ಮಧ್ಯಾಹ್ನ ಸಚಿವ ನಾಗೇಶ್ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಘೋಷಣೆ ಮಾಡಲಿದ್ದು, ತದನಂತರ ವೆಬ್‌ಸೈಟ್‌ಗಳಲ್ಲಿ ರಿಸಲ್ಟ್ ಲಭ್ಯವಾಗಲಿದೆ.
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ಜಾಲತಾಣ sslc.karnataka.gov.in, kseeb.kar.nic.in, karresults.nic.in ದಲ್ಲಿ ರಿಸಲ್ಟ್ ವೀಕ್ಷಿಸಬಹುದಾಗಿದೆ.
ನೋಂದಣಿ ಸಂಖ್ಯೆ ನಮೂದಿಸಿದ ನಂತರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ. ಜು.19ಮತ್ತು22 ರಂದು ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗಿದ್ದು, ಶೇ.99.6ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕೋವಿಡ್ ಕಾರಣದಿಂದಾಗಿ ಬಿಗಿ ಬಂದೋಬಸ್ತ್‌ನಲ್ಲಿ ಪರೀಕ್ಷೆ ನಡೆಸಲಾಗಿತ್ತು.