ಪುತ್ತೂರು: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಶ್ರೀ ವಿಖ್ಯಾತಾನಂದರ ಸ್ವಾಮಿಜಿ ಉಪಸ್ಥಿತಿ ಹಾಗೂ ಆಶೀರ್ವಾದದೊಂದಿಗೆ ಅರಣ್ಯ ಸಂರಕ್ಷಣಾ ಅಧಿಕಾರಿಗಳಾದ ಕಾರ್ಯಪ್ಪ, ಸ್ಥಳೀಯಾಡಳಿತದ ಪ್ರತಿನಿಧಿಗಳು ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಶ್ರೀ ಕ್ಷೇತ್ರದ ವಠಾರದಲ್ಲಿ ಆ.10 ರಂದು ಔಷಧೀಯ ಸಸ್ಯಗಳ ವನಮಹೋತ್ಸವ ಕಾರ್ಯಕ್ರಮ ನಡೆಯಲಿದೆ.
ದೇಯಿ ಬೈದೆತಿಯ ಹೆಸರಿನಲ್ಲಿ ಶ್ರೀ ಕ್ಷೇತ್ರದ ಪಾವಿತ್ರ್ಯಕ್ಕೆ ಪೂರಕವಾಗಿ ಈ ಕಾರ್ಯಕ್ರಮ ನೆರವೇರಲಿದೆ ಎಲ್ಲರೂ ಆಗಮಿಸಿ ಬೇಕಾಗಿ ಗೆಜ್ಜೆಗಿರಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


























