ಪುತ್ತೂರು: ನಗರಕ್ಕೆ ಅತ್ಯಾವಶ್ಯಕ ಯೋಜನೆಯಾದ ಎಪಿಎಂಸಿ ಯನ್ನು ಸಂಪರ್ಕಿಸುವ ರಸ್ತೆಗೆ ರೈಲ್ವೆ ಕೆಳಸೇತುವೆ ನಿರ್ಮಾಣ ಮಾಡುವ ಬಗ್ಗೆ ದೆಹಲಿಯ ಸಂಸತ್ ಭವನದಲ್ಲಿ ಕೇಂದ್ರ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಸಂಸದರಾದ ನಳಿನ್ ಕುಮಾರ್ ಕಟೀಲ್ ಮತ್ತು ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ಭೇಟಿಯಾಗಿ ಮಾತುಕತೆ ನಡೆಸಿದರು.

ರಾಜ್ಯ ಸರ್ಕಾರವು ತನ್ನ ಪಾಲಿನ ಶೇಕಡ 50% ಅನುದಾನವನ್ನು ಮೂಲಭೂತ ಸೌಕರ್ಯ ಇಲಾಖೆ ಮೂಲಕ ಕಾಯ್ದಿರಿಸಿದ್ದು, ಅನುದಾನವನ್ನು ಕೇಂದ್ರ ಸರ್ಕಾರದಿಂದ ತಕ್ಷಣ ಬಿಡುಗಡೆ ಮಾಡುವಂತೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಪುತ್ತೂರು ಎಪಿಎಂಸಿ ಅಧ್ಯಕ್ಷರಾದ ದಿನೇಶ್ ಮೆದು ಹಾಗೂ ನಿರ್ದೇಶಕರಾದ ಬಾಲಕೃಷ್ಣ ಬಾಣಜಾಲು ಉಪಸ್ಥಿತರಿದ್ದರು.