ವಿಟ್ಲ: ಬಂಟ್ವಾಳ ತಾಲೂಕು ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಗೆ ನುಗ್ಗಿದ ಕಳ್ಳರು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ ಜು.11 ರಂದು ನಡೆದಿದೆ.
ಸಂಘ ಕಚೇರಿಯ ಮೇಲ್ಚಾವಣಿ ಹಂಚನ್ನು ಕಳ್ಳರು ತೆಗೆದು ಒಳಗಡೆ ಬಂದು ಕಚೇರಿಯ ಕಪಾಟಿನ ಬಾಗಿಲು ತೆಗೆದು ಹುಡುಕಾಡಿದ್ದು ಯಾವುದೇ ಹಣ,ಬೆಲೆ ಬಾಳುವ ವಸ್ತು ಸಿಗದೆ ಕಳವಿಗೆ ಪ್ರಯತ್ನಿಸಿದ್ದಾರೆ.
ಸೇಫ್ ಲಾಕರ್ ನಲ್ಲಿ ಇದ್ದ ಯಾವುದೇ ಬೆಲೆ ಬಾಳುವ ವಸ್ತುಗಳು ಹಾಗೂ ಅಡಿಕೆ ,ಕೃಷಿ ಕಾಳುಮೆಣಸು ಕಳವು ಆಗಿಲ್ಲ ಎಂದು ತಿಳಿದು ಬಂದಿದೆ. ಬೆಳಿಗ್ಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.
ಘಟನೆ ಬಗ್ಗೆ ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘ(ನಿ)ಮಾಣಿಲ ಶಾಖೆ ವ್ಯವಸ್ಥಾಪಕ ಜಯರಾಮ ಅವರು ಠಾಣೆಯಲ್ಲಿ ದೂರು ನೀಡಿದ್ದಾರೆ. ಠಾಣೆಯಲ್ಲಿ ಕಲಂ 457,380,511 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.