ವಿಟ್ಲ: ವಿಶ್ವ ಹಿಂದೂ ಪರಿಷದ್ ಭಜರಂಗದಳ ವಿಟ್ಲ ಪ್ರಖಂಡ ವತಿಯಿಂದ “ಅಖಂಡ ಭಾರತ ಸಂಕಲ್ಪ ದಿನ” ವನ್ನು ಆ.16 ರಂದು ಸಂಜೆ ವಿಟ್ಲ ಪಂಚಲಿಂಗೇಶ್ವರ ಸದನದಲ್ಲಿ ಆಚರಿಸಲಾಗುತ್ತದೆ.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವ ಹಿಂದೂ ಪರಿಷತ್ ನ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ಭಜರಂಗದಳ ಕರ್ನಾಟಕದ ದಕ್ಷಿಣ ಪ್ರಾಂತ ಸಹ ಸಂಚಾಲಕರಾದ ಮುರಳಿಕೃಷ್ಣ ಹಸಂತ್ತಡ್ಕ, ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಅಧ್ಯಕ್ಷರು ಡಾ. ಪ್ರಸನ್ನ ಪುತ್ತೂರು, ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಸತೀಶ್ ಪುತ್ತೂರು, ಭಜರಂಗದಳ ಪುತ್ತೂರು ಜಿಲ್ಲಾ ಸಂಚಾಲಕರು ಭರತ್ ಕುಂಮ್ಟೆರ್ ಭಾಗವಹಿಸಲಿದ್ದಾರೆ.
ವಿಟ್ಲ ಪ್ರಖಂಡದ ಕಾರ್ಯಕರ್ತರು ಹಾಗೂ ಎಲ್ಲಾ ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ ಭಾಗವಹಿಸಬೇಕಾಗಿ ವಿಶ್ವ ಹಿಂದೂ ಪರಿಷದ್ ಭಜರಂಗದಳ ವಿಟ್ಲ ಪ್ರಖಂಡ ಪ್ರಕಟಣೆಯಲ್ಲಿ ತಿಳಿಸಿದೆ.