ಮಂಗಳೂರು: ಕರ್ನಾಟಕ ಗೃಹಸಚಿವರಾದ ಆರಗ ಜ್ಞಾನೇಂದ್ರ ರವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆ ಸೇರಿ ಕರಾವಳಿಯಾದ್ಯಂತ ನಡೆಯುತ್ತಿರುವ ದೇಶ ವಿರೋಧಿ, ಸಮಾಜ ವಿರೋಧಿ ಚಟುವಟಿಕೆಗಳನ್ನು ಮಟ್ಟಹಾಕಲು ಕ್ರಮಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷದ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಮನವಿ ಸಲ್ಲಿಸಿದರು.
ಮನವಿಯಲ್ಲಿನ ವಿಷಯಗಳು:
- ಕಬಕ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಾತಂತ್ರ್ಯ ರಥ ಯಾತ್ರೆಗೆ ಅಡ್ಡಿಪಡಿಸಿದ ಮತ್ತು ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಗೆ ಅವಮಾನಿಸಿದ ಆರೋಪಿಗಳಿಗೆ ರಾಷ್ಟ್ರದ್ರೋಹದ ಮೊಕ್ಕದ್ದಮೆಯನ್ನು ದಾಖಲಿಸಬೇಕು.
- ಕರಾವಳಿಯಲ್ಲಿ ಉಗ್ರಗಾಮಿಗಳ ಜೊತೆ ಕೆಲವರಿಗೆ ಸಂಪರ್ಕವಿದ್ದು ಕರಾವಳಿಯನ್ನು ಭಯೋತ್ಪಾದನಾ ಚಟುವಟಿಕೆಯ ತಾಣವಾಗಿಸಲು ಪ್ರಯತ್ನಿಸುತ್ತಿದ್ದಾರೆ. ಇದನ್ನು ನಿಗ್ರಹ ಮಾಡಲು ಮಂಗಳೂರಿನಲ್ಲಿ NIA ಕಚೇರಿಯನ್ನು ಸ್ಥಾಪಿಸಬೇಕು.
- ಪ್ರೀತಿ ಪ್ರೇಮದ ಹೆಸರಿನಲ್ಲಿ ಹಿಂದು ಯುವತಿಯರನ್ನು ಮದುವೆಯಾಗಿ ಇಸ್ಲಾಮಿಗೆ ಮಾತಾಂತರ ಮಾಡಿ ಷಡ್ಯಂತ್ರ ಲವ್ ಜಿಹಾದ್,ಮದುವೆಯಾದ ಯುವತಿಯರನ್ನು ದೇಶದ್ರೋಹದ, ಸಮಾಜ ದ್ರೋಹದ ಚಟುವಟಿಕೆಗಳಿಗೆ ತೊಡಗಿಸುತ್ತಿರುವುದು ಕರಾವಳಿಯಲ್ಲಿ ನಿರಂತರವಾಗಿ ನಡೆಯುತ್ತಿದೆ ಇದಕ್ಕೆ ಕಡಿವಾಣ ಹಾಕಲು ರಾಜ್ಯದಲ್ಲಿ ಲವ್ ಜಿಹಾದ್ ತಡೆ ಕಾನೂನು ತರಬೇಕು.
- ಸಾಮಾಜಿಕ ಜಾಲತಾಣಗಲ್ಲಿ ಹಿಂದು ದೈವ ದೇವರುಗಳ ಬಗ್ಗೆ ಅಶ್ಲೀಲವಾಗಿ ಚಿತ್ರಿಸಿ ಅವಹೇಳನ ಅಪಮಾನ ಮಾಡುವುದು ಮತ್ತು ಹಿಂದು ಸಂಘಟನೆಯ ನಾಯಕರ ಬಗ್ಗೆ ಸುಳ್ಳು ಅಪಪ್ರಚಾರ ಮಾಡುತ್ತಿರುವುದು ಹೆಚ್ಚಾಗುತ್ತಿದ್ದು ಇದರ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು.
ಈ ಎಲ್ಲಾ ವಿಷಯಗಳ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್, ವಿಶ್ವ ಹಿಂದು ಪರಿಷದ್ ಜಿಲ್ಲಾಧ್ಯಕ್ಷರು ಗೋಪಾಲ್ ಕುತ್ತಾರ್, ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳಿ ಕೃಷ್ಣ ಹಸಂತಡ್ಕ, ವಿಭಾಗ ಬಜರಂಗದಳ ಸಂಯೋಜಕ್ ಭುಜಂಗ ಕುಲಾಲ್, ಹಿಂಜಾವೇ ಪ್ರಾಂತ ಕಾರ್ಯದರ್ಶಿ ರಾಧಾಕೃಷ ಅಡ್ಯಂತಾಯ, ಪ್ರಾಂತ ಉಪಾಧ್ಯಕ್ಷ ಕಿಶೋರ್ ಕುಮಾರ್,ಚಿನ್ಮಯ್ ರೈ ಈಶ್ವರಮಂಗಲ ಉಪಸ್ಥಿತರಿದ್ದರು.