ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಸನ್ನ ಕಾಲೇಜ್ ಅನ್ನು ಸೀಲ್ ಡೌನ್ ಮಾಡಲಾಗಿದೆ.
ಪ್ರಸನ್ನ ಕಾಲೇಜ್ ನ ಹಾಸ್ಟೆಲ್ ನಲ್ಲಿರುವ 11 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಆ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಸೋಂಕು ಪತ್ತೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಈಗಾಗಲೇ ಕೋವಿಡ್ ಕೇರ್ ಸೆಂಟರ್ ಗೆ ಸ್ಥಳಾಂತರಿಸಲಾಗಿದೆ. ಇನ್ನುಳಿದ ವಿದ್ಯಾರ್ಥಿಗಳ ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ.



























