ಉಪ್ಪಿನಂಗಡಿ: ಹಳೇಗೇಟು ಬಳಿ ಮೀನು ವ್ಯಾಪಾರ ನಡೆಸುತ್ತಿದ್ದ ಅಂಗಡಿಗೆ ಆ.22ರ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಾಕಿ ಸುಟ್ಟಿರುವ ಘಟನೆ ವರದಿಯಾಗಿದ್ದು, ಘಟನಾ ಸ್ಥಳಕ್ಕೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ಹಿಂ.ಜಾ.ವೇ ಮುಖಂಡರು ಭೇಟಿ ನೀಡಿದರು.

ಶೀಘ್ರ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದರು. ಆರೋಪಿಗಳನ್ನು ಇಂದು ಮಧ್ಯರಾತ್ರಿ 2 ಗಂಟೆಯೊಳಗೆ ಬಂಧಿಸದಿದ್ದರೇ ನಾಳೆಯಿಂದ ‘ರಸ್ತೆ ರೋಕೋ’ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಮುಖಂಡರಾದ ಗಣರಾಜ್ ಭಟ್ ಕೆದಿಲ, ಅಜಿತ್ ರೈ ಹೊಸಮನೆ, ರಾಜೇಶ್ ಈಶ್ವರಮಂಗಲ, ಸಂದೀಪ್ ಉಪ್ಪಿನಂಗಡಿ, ಉಪ್ಪಿನಂಗಡಿ ಪಂಚಾಯತ್ ಮಾಜಿ ಸದಸ್ಯ ಚಂದ್ರಶೇಖರ ಮಡಿವಾಳ, ವ್ಯವಸ್ಥಾಪನ ಸಮಿತಿ ಸದಸ್ಯ ಜಯಂತ್, ರಾಮಕುಂಜ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಶಾಂತ್ ರಾಮಕುಂಜ ಹಾಗೂ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.
