ಬೆಂಗಳೂರು: ಪ್ರಸಕ್ತ ಸಾಲಿನ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವೂ ವಿಸ್ತರಿಸಿದ್ದು, ಸೆ.15 ರ ವರೆಗೆ ಅವಕಾಶ ಕಲ್ಪಿಸಿದೆ.
ವಿದ್ಯಾರ್ಥಿಗಳು ಈ ಬಾರಿ ಶಾಲಾ/ಕಾಲೇಜುಗಳಿಗೆ ಪಾವತಿಸಿರುವ ರಶೀದಿ ಹಾಗೂ ವಿದ್ಯಾಸಂಸ್ಥೆಯ ಗುರುತಿನ ಚೀಟಿಯೊಂದಿಗೆ ನಿಗಮದ ಬಸ್ ಗಳಲ್ಲಿ ಸಂಬಂಧಪಟ್ಟ ಮಾರ್ಗದಲ್ಲಿ ಅಥವಾ ಹೊಸ ವಿಳಾಸದಲ್ಲಿರುವ ಶಾಲಾ/ಕಾಲೇಜುಗಳಿಗೆ ತೆರಳಲು ಸೆ.15 ರ ತನಕ ಕರಾರಸಾ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ ಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.
