ಪುತ್ತೂರು: ಬೈಕ್ ಅಪಘಾತದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆ ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಹಿರೇಬಂಡಾಡಿ ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಹಾಗೂ ದೊಡ್ಡಡ್ಕ ನಿವಾಸಿ ಕಾರ್ಮಿಕ ಲೋಹಿತ್ ಎಂಬವರನ್ನು ಭೇಟಿಯಾದ ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ,ಯವರು ಅವರ ಆರೋಗ್ಯವನ್ನು ವಿಚಾರಿಸಿದರು.

ಈ ಭೇಟಿ ಸಂದರ್ಭದಲ್ಲಿ ಬ್ಲಾಕ್ ಪ್ರದಾನ ಕಾರ್ಯದರ್ಶಿ ಅಮಲಾ ರಾಮಚಂದ್ರ, ಬ್ಲಾಕ್ ಕಾರ್ಮಿಕ ಘಟಕದ ಅಧ್ಯಕ್ಷ ಶರೊನ್ ಸಿಕ್ವೆರಾ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟಣೆ ಯ ಅಧ್ಯಕ್ಷ ಸಂತೋಷ್ ಭಂಡಾರಿ ಚಿಲ್ಮೆತ್ತಾರ್ ಉಪಸ್ಥಿತರಿದ್ದರು.


