ಬೆಳ್ತಂಗಡಿ: ತಾಲೂಕಿನ ಗರ್ಡಾಡಿ ಯಲ್ಲಿ ರಸ್ತೆಯ ಗುಂಡಿ ತಪ್ಪಿಸಲು ಹೋಗಿ ರಸ್ತೆ ಬದಿಯ ಚರಂಡಿಗೆ ಕಲ್ಲು ತುಂಬಿದ್ದ ಲಾರಿ ಮಗುಚಿ ಬಿದ್ದ ಘಟನೆ ನಡೆದಿದೆ.
ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿ ಪಕ್ಕದ ಚರಂಡಿಗೆ ಮಗುಚಿ ಬಿದ್ದಿದೆ. ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.