ಪುತ್ತೂರು: ದುರಸ್ಥಿ ನೆಪದಲ್ಲಿ ಕಟ್ಟಡ ಕಾಮಗಾರಿ ನಡೆಸಲಾಗುತ್ತಿತ್ತು ಎನ್ನಲಾದ ಸ್ಥಳಕ್ಕೆ ನಗರಸಭೆ ಅಧಿಕಾರಿಗಳು ಭೇಟಿ ನೀಡಿ ಕಾಮಗಾರಿ ಸ್ಥಗಿತಗೊಳಿಸುವಂತೆ ಎಚ್ಚರಿಕೆ ನೀಡಿದ ಘಟನೆ ಬೊಳುವಾರಿನಲ್ಲಿ ನಡೆದಿದೆ.
ಬೊಳುವಾರು ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದ ಬಳಿ ದುರಸ್ಥಿ ನೆಪದಲ್ಲಿ ಕಟ್ಟಡ ಕಾಮಗಾರಿ ನಡೆಸುತ್ತಿರುವ ಕುರಿತು ನಗರಸಭೆಗೆ ಬಂದಿರುವ ದೂರಿನ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕ ರಾಮಚಂದ್ರ, ಇತರ ಅಧಿಕಾರಿಗಳು ಕಾಮಗಾರಿ ಸ್ಥಗಿತಗೊಳಿಸಲು ಸೂಚನೆ ನೀಡಿದ್ದಾರೆ.
ಸೆ.11 ರ ರಾತ್ರಿ ಮತ್ತೆ ಕೆಲಸ ಆರಂಭ: ದುರಸ್ಥಿ ನೆಪದಲ್ಲಿ ಕಟ್ಟಡ ಕಾಮಗಾರಿ ನಡೆಸಿರುವುದನ್ನು ನಿಲ್ಲಿಸಲು ಸೂಚಿಸಿ ಹೋದ ಬಳಿಕ ಸೆ.11 ರಂದು ರಾತ್ರಿ ಮತ್ತೆ ಕೆಲಸ ಮಾಡುತ್ತಿರುವ ಕುರಿತು ದೂರು ಬಂದ ಮೇರೆಗೆ ನಗರಸಭೆ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿ ಕೆಲಸ ನಿಲ್ಲಿಸಲು ಸೂಚಿಸಿ ಕೆಲಸ ನಿಲ್ಲಿಸಿದ್ದಾರೆ.