ಸುಳ್ಯ: ಅಪ್ರಾಪ್ತ ಬಾಲಕಿಯೊಂದಿಗೆ ಪ್ರೀತಿಯ ನಾಟಕವಾಡಿ ಅತ್ಯಾಚಾರ ನಡೆಸಿದ್ದಾನೆಂಬ ಆರೋಪದಲ್ಲಿ ಯುವಕನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.
ಮಂಡೆಕೋಲು ಗ್ರಾಮದ ಸೊರಂಜ ಜಿತೇಶ್ ಬಂಧಿತ ಯುವಕ. ಹೈಸ್ಕೂಲ್ ವಿದ್ಯಾರ್ಥಿನಿಯೊಬ್ಬಳನ್ನು ಇನ್ ಸ್ಟ್ರಾಗ್ರಾಂನಲ್ಲಿ ಪರಿಚಯಿಸಿಕೊಂಡ ಈತ ಆಕೆಯ ಜತೆ ಪ್ರೀತಿಯ ನಾಟಕವಾಡಿ ಮನೆಯಿಂದ ಕರೆದೊಯ್ದು ಅತ್ಯಾಚಾರ ನಡೆಸಿದನೆನ್ನಲಾಗಿದೆ.
ಈ ಬಗ್ಗೆ ವಿದ್ಯಾರ್ಥಿನಿಯ ಮನೆಯವರು ಸುಳ್ಯ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ನಿನ್ನೆ ಯುವಕನನ್ನು ಅಡ್ಕಾರ್ ಬಳಿ ಬಂಧಿಸಿದ್ದಾರೆಂದು ತಿಳಿದು ಬಂದಿದೆ.
ಯುವಕ ವಿದ್ಯಾರ್ಥಿನಿಯನ್ನು ಕರೆದೊಯ್ಯುತ್ತಿದ್ದ ಆಲ್ಟೋ ಕಾರನ್ನು ಕೂಡಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.