ವಿಟ್ಲ: ಅಲ್‌ಖೈರ್ ಮಹಿಳಾ ಶರೀಅತ್ ಕಾಲೇಜು ವಿಟ್ಲ ಮತ್ತು ಕೇಂದ್ರ ಜುಮಾ ಮಸೀದಿ ಆಡಳಿತ ಸಮಿತಿ ವಿಟ್ಲ ಜಂಟಿ ಆಶ್ರಯದಲ್ಲಿ ಪ್ರಥಮ ಸನದುದಾನ ಸಮಾರಂಭ ಸೆ.19 ರಂದು ಬೆಳಿಗ್ಗೆ 9 ಗಂಟೆಗೆ ವಿಟ್ಲ ಕೇಂದ್ರ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ.
ಕಾಲೇಜು ಆಡಳಿತ ಸಮಿತಿ ಅಧ್ಯಕ್ಷ ಇಬ್ರಾಹಿಂ ಏರ್‌ಸೌಂಡ್ಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಇರ್ಷಾದ್ ದಾರಿಮಿ ಮಿತ್ತಬೈಲು ದುವಾಃ ಆಶೀರ್ವಚನ ನೀಡಲಿದ್ದಾರೆ. ಕಾಲೇಜಿನ ಅಧ್ಯಾಪಕ ಮೂಸಲ್ ಫೈಝಿ ಉದ್ಘಾಟಿಸಲಿದ್ದಾರೆ.
ಸೈಯ್ಯದ್ ಅಲಿ ತಂಙಳ್ ಕುಂಬೋಲ್ ಸನದುದಾನ ಪ್ರದಾನ ಮತ್ತು ಅನುಗ್ರಹ ಭಾಷಣ ಮಾಡಲಿದ್ದಾರೆ. ಜಿ.ಎಂ ಅಬ್ದುರ್ರಹ್ಮಾನ್ ಫೈಝಿ ಸನದುದಾನ ಪ್ರಭಾಷಣ ಮಾಡಲಿದ್ದಾರೆ.
ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಇಬ್ರಾಹಿಂ ಹಳೆಮನೆ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಅಬೂಬಕ್ಕರ್ ಸಿದ್ದೀಕ್ ಜಲಾಲಿ ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ. ಮಹಮ್ಮದ್ ಅಲಿ ಫೈಝಿ ಇರ್ಫಾನಿಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಅಬ್ಬಾಸ್ ದಾರಿಮಿ ಕೆಲಿಂಜ ಸ್ವಾಗತಿಸಲಿದ್ದಾರೆ. ಮೊದಲಾದ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.