ಬೆಳ್ತಂಗಡಿ: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸಬರಬೈಲಿನಲ್ಲಿ ನಡೆದಿದೆ.
ಬಂಧಿತ ಆರೋಪಿಗಳನ್ನು ಮಹಮ್ಮದ್ ರಫೀಕ್ ಮತ್ತು ನೌಪಾಲ್ ಎಂದು ಗುರುತಿಸಲಾಗಿದೆ.
ಸೆ.17 ರಂದು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸಬರಬೈಲು ಎಂಬಲ್ಲಿ ಬೆಳ್ತಂಗಡಿ ಠಾಣಾ ಪಿಎಸ್ ಐ ನಂದಕುಮಾರ್ ರವರು ಸಿಬ್ಬಂದಿಗಳೊಂದಿಗೆ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಪುಂಜಾಲಕಟ್ಟೆ ಕಡೆಯಿಂದ ಗುರುವಾಯನಕೆರೆ ಕಡೆಗೆ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ನಡೆಸುತ್ತಿರುವುದು ಕಂಡು ಬಂದಿದ್ದು, ಆರೋಪಿಗಳಿಂದ 45,850 ರೂ. ಮೌಲ್ಯದ 1.310 ಗ್ರಾಂ ಗಾಂಜಾವನ್ನು ಮತ್ತು ಸಾಗಾಟಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.
ಆರೋಪಿಗಳ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 71/2021 ಕಲಂ:8(ಸಿ) 20(ಬಿ)(¡¡) NDPS Act 1985 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.