ಬಂಟ್ವಾಳ: ಮಂಗಳೂರು ಲಾಡ್ಜ್ ಒಂದರಲ್ಲಿ ಬಂಟ್ವಾಳ ಮೂಲದ ವ್ಯಕ್ತಿಯೋರ್ವ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಗುರುಪ್ರಸಾದ್ ಎಂದು ಗುರುತಿಸಲಾಗಿದೆ. ಗುರುಪ್ರಸಾದ್ ಅವರು ಬಂಟ್ವಾಳ ತಾಲೂಕಿನ ಬ್ರಹ್ಮರಕೋಟ್ಲು ಕನಪಾಡಿ ನಿವಾಸಿಯಾಗಿದ್ದು, ಉದ್ಯಮಿಯಾಗಿದ್ದಾರೆ. ಅವರು ಸೆ.20 ರಂದು ಮಂಗಳೂರಿನಲ್ಲಿ ತಂಗಿದ್ದರು.

ಆ ಬಳಿಕ ರೂಮ್ ಲಾಕ್ ಆಗಿತ್ತು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದ ಹಿನ್ನೆಲೆ, ಪಾಂಡೇಶ್ವರ ಎಸ್.ಐ ನೇತೃತ್ವದಲ್ಲಿ ಲಾಡ್ಜ್ ನ ಬಾಗಿಲು ಒಡೆದು ಒಳಗೆ ಪ್ರವೇಶ ಮಾಡಿದಾಗ ಗುರುಪ್ರಸಾದ್ ಅವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಗುರು ಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರಾ..? ಅಥವಾ ಅಸೌಖ್ಯದಿಂದ ಮೃತಪಟ್ಟಿದ್ದಾರಾ..? ಎಂಬುದು ಮರಣೋತ್ತರ ಪರೀಕ್ಷೆ ಬಳಿಕ ಗೊತ್ತಾಗಬೇಕಾಗಿದೆ.