ಪುತ್ತೂರು: ಮರ್ತಡ್ಕ ಮುಂಡೂರು ಸಂಪರ್ಕ ಕಲ್ಪಿಸುವ ರಸ್ತೆಯು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸುಮಾರು 3ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಿದ್ದು, ಸದ್ರಿ ರಸ್ತೆಯ ಉದ್ಘಾಟನೆ ಕಾರ್ಯಕ್ರಮ ನಡೆಯಿತು.
ರಸ್ತೆಯ ಉದ್ಘಾಟನೆ ಯನ್ನು ಪಂಚಾಯತ್ ಅಧ್ಯಕ್ಷೆ ಪುಷ್ಪ ಮತ್ತು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಬಾಲಚಂದ್ರ ಗೌಡ ಕಡ್ಯ ಅವರು ತೆಂಗಿನ ಕಾಯಿ ಒಡೆಯುವ ಮೂಲಕ ನೆರವೇರಿಸಿದರು. ಈ ಸಂದರ್ಭದಲ್ಲಿ ಬಹುದಿನದ ಬೇಡಿಕೆಯನ್ನು ಈಡೇರಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷರನ್ನು ಶಾಲು ಹೊದಿಸಿ. ಹಾರ ಹಾಕಿ. ಫಲಪುಷ್ಪ ನೀಡಿ ಸನ್ಮಾನಿಸಲಾಯಿತು. ಸನ್ಮಾನ ವನ್ನು ಊರಿನ ಪ್ರಮುಖರಾದ ಕೊರಗಪ್ಪ ನಾಯ್ಕ್. ಕಿಸ್ತು ಡಿಸೋಜಾ ಮತ್ತು ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷರು, ಮುಂದಿನ ದಿವಸದಲ್ಲೂ ಊರಿನ ಸರ್ವತೋಮುಖ ಅಭಿವೃದ್ದಿ ಮಾಡುವುದಾಗಿ ಹೇಳಿದರು. ಬಾಲಚಂದ್ರ ಗೌಡ ಮಾತನಾಡಿ ಅನೇಕ ವರ್ಷದ ಬೇಡಿಕೆಯನ್ನು ಈಡೇರಿಸಿದ ಅಧ್ಯಕ್ಷರನ್ನು ಊರಿನವರ ಪರವಾಗಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ವಾರ್ಡ್ ಸದಸ್ಯರಾದ ಅಶೋಕ್ ಪುತ್ತಿಲ,ಬಾಲಕೃಷ್ಣ ಪೂಜಾರಿ, ಅರುಣಾ ಕಣ್ಣರ್ನೂಜಿ, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಶ್ರೀಧರ ನಾಯ್ಕ್, ಕಾರ್ಯದರ್ಶಿ ಜನಾರ್ದನ ಪೂಜಾರಿ, ಮುಂಡೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಶ್ರೀಕಾಂತ್ ಆಚಾರ್, ಶ್ರೀರಾಮ ಗೆಳೆಯರ ಬಳಗದ ಅಧ್ಯಕ್ಷ ಹರೀಶ್ ಬಿಕೆ, ಕಾರ್ಯದರ್ಶಿ ದಿನೇಶ್ ಬಿಕೆ, ಪ್ರಮುಖರಾದ ಅರುಣ್ ಪುತ್ತಿಲ, ಅನಿಲ್ ಕಣ್ಣರ್ನೂಜಿ, ಮೋಹನ ನಾಯ್ಕ್.ರಮೇಶ್ ನಾಡಜೆ, ರಸ್ತೆಯ ಫಲಾನುಭವಿಗಳು ಹಾಗೂ ಊರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶ್ರೀರಾಮ ಗೆಳೆಯರ ಬಳಗದ ಧನಂಜಯ ಸ್ವಾಗತಿಸಿ, ಪುರುಷೋತ್ತಮ್ ವಂದಿಸಿದರು.