ಬೆಂಗಳೂರು:ಹಿಂದೂ ಜಾಗರಣ ವೇದಿಕೆ ಮುಖಂಡರ ನೇತೃತ್ವದ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ರಾಜ್ಯ ಸರ್ಕಾರ ಹೊರಡಿಸಲಿರುವ ಧಾರ್ಮಿಕ ಸ್ಥಳಗಳ ಸಂರಕ್ಷಣಾ ವಿಧೇಯಕದಲ್ಲಿ ಆಗಬೇಕಾದ ಮಾರ್ಪಾಡುಗಳ ಬಗ್ಗೆ ಮತ್ತು ಲೋಪ ದೋಷಗಳನ್ನು ಸರಿಪಡಿಸುವಂತೆ ಆಗ್ರಹಿಸಲಾಯಿತು.
ಹಿಂದೂ ಜಾಗರಣ ವೇದಿಕೆ ರಾಜ್ಯಾಧ್ಯಕ್ಷರಾದ ಬಿ ಎಸ್ ಪೈ ಹಾಗೂ ಕಾರ್ಯದರ್ಶಿ ದೋ ಕೇಶವಮೂರ್ತಿ ಯವರ ನೇತೃತ್ವದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ರಾಜ್ಯ ಸರ್ಕಾರ ಹೊರಡಿಸಲಿರುವ ಧಾರ್ಮಿಕ ಸ್ಥಳಗಳ ಸಂರಕ್ಷಣಾ ವಿಧೇಯಕದಲ್ಲಿ ಆಗಬೇಕಾದ ಮಾರ್ಪಾಡುಗಳ ಬಗ್ಗೆ ಮತ್ತು ಲೋಪ ದೋಷಗಳನ್ನು ಸರಿಪಡಿಸಿ ಸಹಿ ಹಾಕುವಂತೆ ಆಗ್ರಹಿಸಿದರು.