ಪುತ್ತೂರು: ಕೆಲ ದಿನಗಳ ಹಿಂದೆ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ಬನ್ನೂರು ಕರ್ಮಲ ಬೀರಿಕಟ್ಟೆ ನಿವಾಸಿ ಆಟೋ ಚಾಲಕ ಮೋಹನ್ ರವರ ಪುತ್ರ ನಂದಕುಮಾರ್(22) ಅ.07 ರಂದು ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು.
ನಂದ ಕುಮಾರ್ ಕೆಲದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದ್ದು, ಮೊದಲಿಗೆ ಪುತ್ತೂರು ಮತ್ತು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ವೆಲ್ಡಿಂಗ್ ಕೆಲಸ ನಿರ್ವಹಿಸುತ್ತಿದ್ದ ಅವರು ಬಜರಂಗದಳ ಕರ್ಮಲ ಘಟಕದ ಸಾಪ್ತಮಿಕ್ ಮಿಲನ್ ಪ್ರಮುಖ್ ಜವಾಬ್ದಾರಿಯನ್ನು ಹೊಂದಿದ್ದರು.
ಮೃತರು ತಂದೆ, ತಾಯಿ, ಅಕ್ಕ, ತಮ್ಮ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.