ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಪ್ರಭಾವಿ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಹಾಗೂ ಹಲವರ ಮನೆ ಮೇಲೆ ಏಕಕಾಲಕ್ಕೆ ಐಟಿ ದಾಳಿ ನಡೆದಿದೆ. ಬೆಂಗಳೂರಿನ ಭಾಷ್ಯಂ ಸರ್ಕಲ್‌ನಲ್ಲಿರುವ ಬಿಎಸ್ ಯಡಿಯೂರಪ್ಪ ಆಪ್ತ ಸಹಾಯಕ ಉಮೇಶ್ ಮನೆ ಮತ್ತು ಕಚೇರಿ ಸೇರಿ 4 ಕಡೆಗಳಲ್ಲಿ ಐಟಿ ದಾಳಿ ನಡೆದಿದೆ.
ಉಮೇಶ್ ಅವರು ಮಾಜಿ ಸಿಎಂ ಯಡಿಯೂರಪ್ಪ, ಸಂಸದ ರಾಘವೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಮೂವರಿಗೂ ಪಿಎ ರೀತಿ ಕೆಲಸ ಮಾಡುತ್ತಿದ್ದರು. ಯಡಿಯೂರಪ್ಪ ವಿಪಕ್ಷ ನಾಯಕರಾಗಿದ್ದಾಗ ಮತ್ತು ಮುಖ್ಯಮಂತ್ರಿ ಆಗಿದ್ದಾಗ ಅವರಿಗೆ ಉಮೇಶ್ ಪಿಎ ಆಗಿದ್ದರು.
300ಕ್ಕೂ ಅಧಿಕಾರಿಗಳ ತಂಡವು ಬೆಂಗಳೂರಿನ ವಿವಿಧೆಡೆ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದೆ. ತೆರಿಗೆ ವಂಚನೆ ಹಾಗೂ ತೆರಿಗೆ ವಂಚನೆಗೆ ಸಹಾಯ ಆರೋಪದ ಮೇಲೆ ಈ ದಾಳಿ ನಡೆದಿದೆ.