ಸಕಲೇಶಪುರ: ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ವೊಂದು ಪಲ್ಟಿಯಾದ ಘಟನೆ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ಗುರುವಾರ ಮುಂಜಾನೆ ಈ ಘಟನೆ ನಡೆದಿದೆ.
ಮಂಗಳೂರಿಂದ ಬೆಂಗಳೂರಿಗೆ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಉರುಳಿ ಬಿದ್ದಿದ್ದು, ಪರಿಣಾಮ ಅನಿಲ ಸೋರಿಕೆಯ ಭೀತಿ ವಾತಾವರಣ ಉಂಟಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಶಿರಾಡಿ ಘಾಟ್ನಲ್ಲಿ ಕೆಲ ಗಂಟೆಗಳ ಕಾಲ ಸಂಪೂರ್ಣ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು.
ಬಳಿಕ ಪೊಲೀಸರು ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಅನುವು ಮಾಡಿಕೊಟ್ಟಿದ್ದಾರೆ. ಭಾರತ್ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದ ಪರಿಣಾಮ ಇಂಜಿನ್ ಒಳಗೆ ಸಿಲುಕಿದ್ದ ಚಾಲಕನನ್ನು ಕ್ರೇನ್ ಬಳಸಿ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿದೆ.