ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಸ್ಟಮ್ ಅಡ್ಮಿನ್ ಆಗಿದ್ದ ವಿಟ್ಲ ಎರುಂಬು ನಿವಾಸಿ ಸುಬ್ರಹ್ಮಣ್ಯ ಪ್ರಸಾದ್ ಎರುಂಬು ಅ.14 ರಂದು ನಿಧನರಾದರು.
ಸುಬ್ರಹ್ಮಣ್ಯ ಪ್ರಸಾದ್ ರವರು ಕಳೆದ ಕೆಲ ತಿಂಗಳ ಹಿಂದೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಮಂಗಳೂರಿನ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೇ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಂಜೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ವಿವೇಕಾನಂದ ಕಾಲೇಜ್ ನಲ್ಲಿ ಹಲವಾರು ವರ್ಷ ಸೇವೆ ಸಲ್ಲಿಸುತ್ತಾ ತಮ್ಮ ಸುತ್ತ ಮುತ್ತಲಿನ ಊರುಗಳಲ್ಲಿ ಕಂಪ್ಯೂಟರ್ ಸರ್ವಿಸ್ ಕೊಡುವ ಮುಖಾಂತರ ಚಿರಪರಿಚಿತರಾಗಿದ್ದರು.
ಮೃತರು ಪತ್ನಿ ಉಮಾಶಂಕರಿ, ಇಬ್ಬರು ಮಕ್ಕಳು, ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.