ಪುತ್ತೂರು: ಅನ್ಯಕೋಮಿನ ವ್ಯಕ್ತಿಯೊಬ್ಬ 20 ವರ್ಷದ ಎಂಡೋಸಲ್ಪಾನ್ ಪೀಡಿತ ಯುವಕನ ಮೇಲೆ ಅತ್ಯಾಚಾರ ನಡೆಸಿದ ಘಟನೆ ಪುತ್ತೂರಿನ ಮುರದಲ್ಲಿ ನಡೆದಿದ್ದು, ಬಂಧಿತ ಆರೋಪಿಯನ್ನು ಮುರ ನಿವಾಸಿ ಮಹಮ್ಮದ್ ಹನೀಫ್ (67) ಎನ್ನಲಾಗಿದೆ.
ಹನೀಫ್ 20 ವರ್ಷದ ಎಂಡೋಸಲ್ಪಾನ್ ಪೀಡಿತ ಯುವಕನ ಮೇಲೆ ಅತ್ಯಾಚಾರವೆಸಗಿದ್ದು, ಈ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ತಂದೆ ನೀಡಿದ ದೂರಿನ ಆಧಾರದ ಮೇಲೆ ಆರೋಪಿಯನ್ನು ಪುತ್ತೂರು ನಗರ ಠಾಣೆ ಪೊಲೀಸರು ಬಂಧಿಸಿದ್ದು, ಬಂಧಿತ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.
ನಿತ್ಯವೂ ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರದ ಪ್ರಕರಣಗಳು ಕೇಳುತ್ತಲೇ ಇರುತ್ತೇವೆ. ಇದೀಗ ಇದಕ್ಕೆ ವಿರುದ್ಧವಾಗಿ ವ್ಯಕ್ತಿಯೋರ್ವ ತನ್ನದೇ ಲಿಂಗಕ್ಕೆ ಸೇರುವವರ ಮೇಲೆ ಅತ್ಯಾಚಾರ ನಡೆಸಿರುವ ಪ್ರಕರಣ ಎಲ್ಲರಲ್ಲೂ ಆತಂಕವನ್ನು ಉಂಟುಮಾಡಿದೆ.