ಉಳ್ಳಾಲ: ವ್ಯಕ್ತಿಯೋರ್ವರಿಗೆ ಚೂರಿ ಇರಿದ ಘಟನೆ ಉಳ್ಳಾಲದಲ್ಲಿ ನಡೆದಿದೆ.
ಚೂರಿ ಇರಿತಕ್ಕೆ ಒಳಗಾದ ವ್ಯಕ್ತಿಯನ್ನು ಗ್ಯಾಸ್ ರಿಪೇರಿ ಅಂಗಡಿ ಮಾಲೀಕ ಹರೀಶ್ ಎನ್ನಲಾಗಿದೆ.
ಉಳ್ಳಾಲ ಪೊಲೀಸರು ಗಾಯಾಳುವನ್ನು ತೊಕ್ಕೊಟ್ಟು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ವೈಯಕ್ತಿಕ ದ್ವೇಷದಿಂದ ಈ ಕೃತ್ಯ ವೆಸಗಿದ್ದಾರೆ ಎನ್ನಲಾಗಿದೆ. ಉಳ್ಳಾಲ ಉಳಿಯ ನಿವಾಸಿ ವಿಶಾಲ್ ಎಂಬಾತನಿಂದ ಕೃತ್ಯ ನಡೆದಿರುವ ಶಂಕೆಯಿದ್ದು, ಪೊಲೀಸರಿಂದ ವಿಶಾಲ್ ಎಂಬಾತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.