ಪುತ್ತೂರು: ಬಡಗನ್ನೂರು ಗ್ರಾಮದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರವೆಸಗಿ ಆಕೆ ಮಗುವಿಗೆ ಜನ್ಮ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ನೀಡಿರುವ ಹೇಳಿಕೆಯಲ್ಲಿ ಆರೋಪಿಯಾಗಿ ಹೆಸರಿಸಲ್ಪಟ್ಟಿರುವ ನಾರಾಯಣ ರೈ ರವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ನಲ್ಲಿ ಆರೋಪಿಯಾಗಿ ನಾರಾಯಣ ರೈ (73ವ.)ಯವರ ಹೆಸರು ಇರಲಿಲ್ಲವಾದರೂ ಬಳಿಕ ಘಟನೆ ಕುರಿತು ನ್ಯಾಯಾಧೀಶರ ಮುಂದೆ ಸಂತ್ರಸ್ತೆ ನೀಡಿದ್ದ ಖಾಸಗಿ ಹೇಳಿಕೆಯಲ್ಲಿ ಆರೋಪಿಯಾಗಿ ನಾರಾಯಣ ರೈಯವರ ಹೆಸರನ್ನು ಉಲ್ಲೇಖಿಸಿದ್ದರು.
ಈ ಕಾರಣದಿಂದಾಗಿ ಅವರು ನಿರೀಕ್ಷಣಾ ಜಾಮೀನು ಕೋರಿ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೇ ಅರ್ಜಿಯನ್ನು ನ್ಯಾಯಾಲಯ ಅ.22 ರಂದು ವಜಾಗೊಳಿಸಿದೆ.