ನೆಲ್ಯಾಡಿ: ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಆ. 27 ರಂದು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಸಮೀಪದ ಲಾವತಡ್ಕ ಎಂಬಲ್ಲಿ ನಡೆದಿದೆ.
ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರಿನಲ್ಲಿ ಪೊಲೀಸ್ ಸಿಬ್ಬಂದಿ ಸಿದ್ದಪ್ಪ ಎನ್ನಲಾಗಿದೆ.
ಇವರು ಮಂಗಳೂರಿನಿಂದ ಹಾಸನಕ್ಕೆ ಹೋಗುತ್ತಿದ್ದ ವೇಳೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.ಗಾಯಾಳುವನ್ನು ಹಾಸನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.