ಪಡುಬಿದ್ರೆ: ಬಜರಂಗದಳ ಕಾರ್ಯಕರ್ತರು ಹಾಗೂ ಪೊಲೀಸ್ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಲಾರಿಯಲ್ಲಿ ಕೊಂಡೊಯ್ಯುತ್ತಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಿದ ಘಟನೆ ಪಡುಬಿದ್ರೆಯಲ್ಲಿ ನಡೆದಿದೆ.
ಲಾರಿಯೊಂದರಲ್ಲಿ 25ಕ್ಕೂ ಹೆಚ್ಚು ಜಾನುವಾರುಗಳನ್ನು ಮಾಂಸ ಮಾಡುವ ಉದ್ದೇಶದಿಂದಾಗಿ ಕೊಂಡೊಯ್ಯುತ್ತಿದ್ದು, ಈ ಬಗ್ಗೆ ಮಾಹಿತಿ ತಿಳಿದ ಬಜರಂಗದಳ ಕಾರ್ಯಕರ್ತರು, ಪೊಲೀಸರಿಗೆ ಮಾಹಿತಿ ತಿಳಿಸಿ ದಾಳಿ ನಡೆಸಿದರು ಎಂದು ತಿಳಿದು ಬಂದಿದೆ.