ಕನ್ನಡ ಚಿತ್ರರಂಗದ ಮೇರು ನಟ ಡಾ| ರಾಜ್ ಕುಮಾರ್ ಪುತ್ರ ಪವರ್ ಸ್ಟಾರ್ ‘ಪುನಿತ್ ರಾಜ್ ಕುಮಾರ್’ (46) ಆರೋಗ್ಯದಲ್ಲಿ ಇಂದು ತೀವ್ರ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.ಆದರೇ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಶಿವರಾಜ್ಕುಮಾರ್ ಅವರ ಬಹುನಿರೀಕ್ಷಿತ ಸಿನಿಮಾ ‘ಭಜರಂಗಿ’ ಇಂದು ಅದ್ದೂರಿಯಾಗಿ ತೆರೆಕಂಡಿದ್ದು, ಅಣ್ಣನ ಸಿನಿಮಾವನ್ನ ಕಣ್ತುಂಬಿಕೊಳ್ಳಲೆಂದು ಥಿಯೇಟರ್ಗೆ ಹೋಗಲು ಪುನೀತ್ ಪ್ಲಾನ್ ಮಾಡಿದ್ದರಂತೆ. ಅಷ್ಟರಲ್ಲಿ ಹೃದಯಾಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಶುಕ್ರವಾರ ಬೆಳಗ್ಗೆ ಜಿಮ್ನಲ್ಲಿ ವರ್ಕ್ಔಟ್ ಮಾಡುತ್ತಿದ್ದ ವೇಳೆ ಕುಸಿದು ಅಪ್ಪು ಬಿದ್ದರು ಎನ್ನಲಾಗಿದೆ.
ಅಪ್ಪು ನಿಧನ ವಿಷಯ ಕನ್ನಡ ಚಿತ್ರರಂಗಕ್ಕೆ ಭರ ಸಿಡಿಲು ಬಡಿದಂತಾಗಿದೆ. ಚಿಕ್ಕ ವಯಸ್ಸಿನಿಂದಲೂ ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ ಪುನೀತ್ ಅವರಿಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಫ್ಯಾಮಿಲಿ ಆಡಿಯನ್ಸ್ ಅವರನ್ನು ಹೆಚ್ಚು ಇಷ್ಟಪಡುತ್ತಾರೆ. ಮಕ್ಕಳಿಗೂ ಅಪ್ಪು ಎಂದರೆ ಅಚ್ಚುಮೆಚ್ಚು. ಎಲ್ಲರೂ ಸೋಶಿಯಲ್ ಮೀಡಿಯಾ ಮೂಲಕ ಪ್ರಾರ್ಥಿಸಿದ್ದರು. ಆದರೆ, ಈ ಪ್ರಾರ್ಥನೆ ಕೊನೆಗೂ ಈಡೇರಲೇ ಇಲ್ಲ.. ಹಲವಾರು ಅಭಿಮಾನಿಗಳು ಆಸ್ಪತ್ರೆಗೆ ಬಳಿ ಜಮಾಯಿಸಿದ್ದಾರೆ.