ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಉದ್ಯಮಿಗಳಾದ ಕೋಡಿಂಬಾಡಿ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈಯವರು ಲೋಕ ಕಲ್ಯಾಣಾರ್ಥವಾಗಿ ಅ.29 ರಂದು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ಉರುಳು ಸೇವೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅಶೋಕ್ ಕುಮಾರ್ ರೈ, ಡಿಸೆಂಬರ್ ನಲ್ಲಿ ನಡೆಯಲಿರುವ ಶ್ರೀ ಕ್ಷೇತ್ರದ ಬ್ರಹ್ಮಕಲಶೋತ್ಸವ ಯಾವುದೇ ತೊಂದರೆಯಿಲ್ಲದೆ ನಡೆಯಬೇಕು, ಲೋಕ ಕಲ್ಯಾಣವಾಗಬೇಕು ಮತ್ತು ಸ್ವ ಕಾರ್ಯದಲ್ಲೂ ಯಶಸ್ಸು ಲಭಿಸಿದ ಹಿನ್ನೆಲೆಯಲ್ಲಿ ಉರುಳು ಸೇವೆ ಮಾಡಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಅಶೋಕ್ ರೈಯವರ ತಾಯಿ ಗಿರಿಜಾ ಎಸ್.ರೈ, ಪತ್ನಿ ಸುಮಾ ಅಶೋಕ್ ರೈ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

























