ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ. 32,55,330 ರೂ. ವೌಲ್ಯದ 663 ಗ್ರಾಂ ಚಿನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ.
ದುಬೈಯಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿಕ ಅಕ್ರಮವಾಗಿ ಚಿನ್ನ ಸಾಗಾಟ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರು ತಲುಪಿದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿದು ಬಂದಿದೆ.