ಮಂಗಳೂರು: ಕೇಂದ್ರ ಗೃಹ ಸಚಿವಾಲಯವು ವಿಶೇಷ ಕಾರ್ಯಾಚರಣೆಗಾಗಿ ನೀಡುವ ಪುರಸ್ಕಾರ ಮಂಗಳೂರಿನ ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ರವರಿಗೆ ಲಭಿಸಿದೆ.
ಉಗ್ರರ ವಿರುದ್ಧ ಕಾರ್ಯಾಚರಣೆಗಾಗಿ ಈ ಪ್ರಶಸ್ತಿ ನೀಡಲಾಗುತ್ತದೆ.
ಮಹೇಶ್ ಪ್ರಸಾದ್ ಅವರು ಉಡುಪಿ ಜಿಲ್ಲೆ ಚೇರ್ಕಾಡಿ ನಿವಾಸಿ, ಮೂಡುಬಿದಿರೆ ಮಹಾವೀರ ಕಾಲೇಜಿನ ಹಳೆ ವಿದ್ಯಾರ್ಥಿ. ಕಾರವಾರ, ಪುತ್ತೂರು, ಮಣಿಪಾಲ, ಕಾಪು ಪೊಲೀಸ್ ಠಾಣೆಗಳಲ್ಲಿ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿ ಕಳೆದ ಒಂದು ವರ್ಷದಿಂದ ಮಂಗಳೂರು ಸಿಸಿಬಿಯಲ್ಲಿ ಕಾರ್ಯಾನಿರ್ವಹಿಸುತ್ತಿದ್ದಾರೆ. ಕೆಲವು ತಿಂಗಳ ಹಿಂದೆ ಐಸಿಸ್ ವಿರುದ್ಧ ನಡೆಸಿದ ಕಾರ್ಯಾಚರಣೆಗಾಗಿ ಈ ಪುರಸ್ಕಾರ ಬಂದಿದೆ.



























