ಬಂಟ್ವಾಳ: ಕಂಟೈನರ್ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೆಲ್ಕಾರ್ ನಲ್ಲಿ ಅ. 31 ರಂದು ರಾತ್ರಿ ನಡೆದಿದೆ.
ಮೃತ ಬೈಕ್ ಸವಾರನನ್ನು ಬಂಟ್ವಾಳ ತಾಲೂಕಿನ ಪಂಜಾಜೆ ನಿವಾಸಿ ತಿಲಕ್(29) ಎನ್ನಲಾಗಿದೆ.
ಕಂಟೈನರ್ ಲಾರಿ ಹಾಗೂ ಬೈಕ್ ನಡುವಿನ ಡಿಕ್ಕಿಯ ರಭಸಕ್ಕೆ ತಿಲಕ್ ರವರು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ, ಅದಾಗಲೇ ಅವರು ಮೃತಪಟ್ಟಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



























