ನೆಲ್ಯಾಡಿ: ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆದ್ದಾರಿಯ ಗೋಳಿತೊಟ್ಟು ಎಂಬಲ್ಲಿ ನ.7 ರಂದು ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಹಾಗೂ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಹುಂಡೈ ವರ್ಣಾ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಗಂಭೀರ ಗಾಯಗೊಂಡ ನಾಲ್ವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.