ಪುತ್ತೂರು : ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯರ ವಿರುದ್ಧವಾಗಿ ವ್ಯಕ್ತಿಯೋರ್ವರು ಅವಾಚ್ಯ ಶಬ್ದಗಳಿಂದ ನಿಂದಿಸಿ ತರಾಟೆಗೆ ತೆಗೆದುಕೊಂಡು ಹಲ್ಲೆಗೆ ಯತ್ನಿಸಿದ ಘಟನೆ ನ. 9ರಂದು ನಡೆದಿದೆ ಎಂದು ತಿಳಿದು ಬಂದಿದೆ.
ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರೊಬ್ಬರ ಮೇಲೆ ವ್ಯಕ್ತಿಯೊಬ್ಬ ಅವಾಚ್ಯ ಶಬ್ದಗಳಿಂದ ನಿಂದಿಸಿ, ಸಮಾಧಾನ ಪಡಿಸಲು ಬಂದವರ ಮೇಲೂ ಹರಿಹಾಯ್ದು ಕೆಟ್ಟ ಪದಗಳನ್ನು ಬಳಸಿ ನಿಂದಿಸಿದ ಬಗ್ಗೆ ವರದಿಯಾಗಿದೆ.
ಘಟನೆಗೆ ಸಂಬಂಧಿಸಿದಂತೆ ವೈದ್ಯರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆಂದು ತಿಳಿದು ಬಂದಿದೆ