ಬಾಲಿವುಡ್ ಖ್ಯಾತ ನಟಿ ಮತ್ತು ಪದ್ಮಶ್ರೀ ಪುರಸ್ಕೃತೆ ಕಂಗನಾ ರಣೌತ್ ಮತ್ತೆ ವಿವಾದದ ಸುಳಿಗೆ ಸಿಲುಕಿದ್ದಾರೆ. ಸದಾ ಒಂದಿಲ್ಲೊಂದು ವಿವಾದಗಳನ್ನು ಮೈಮೇಲೆ ಎಳೆದುಕೊಂಡು ಸುದ್ದಿಯಲ್ಲಿರುವ ನಟಿ ಇದೀಗ ಭಾರತಕ್ಕೆ ಸ್ವಾತಂತ್ರ್ಯ ಲಭಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಇತ್ತೀಚಿಗೆ ಖಾಸಗಿ ಸುದ್ದಿ ಮಾಧ್ಯಮ ನಡೆಸಿದ ಸಂದರ್ಶನದಲ್ಲಿ ‘1947ರಲ್ಲಿ ಭಾರತಕ್ಕೆ ಸಿಕ್ಕಿದ್ದು ಭಿಕ್ಷೆ, 2014ರಲ್ಲಿ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು’ ಎಂದು ಪ್ರಧಾನಿ ನರೇಂದ್ರ ಮೋದಿಯನ್ನು ಪರೋಕ್ಷವಾಗಿ ಹಾಡಿ ಹೊಗಳಿದ್ದಾರೆ. ಸದ್ಯ ಕಂಗನಾರ ಹೇಳಿಕೆ ತೀವ್ರ ವಿವಾದ ಹುಟ್ಟು ಹಾಕಿದೆ. ಈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳು ಸೇರಿದಂತೆ ಕಂಗನಾ ಮೇಲೆ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಗಳು ಕೇಳಿ ಬರುತ್ತಿವೆ.
ಸ್ವಾತಂತ್ರ್ಯ ಚಳವಳಿಯ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದ ಕಂಗನಾ ಮೇಲೆ ದೇಶದ್ರೋಹದ ಕೇಸ್ ದಾಖಲಿಸುವಂತೆ ಆಮ್ ಆದ್ಮಿ ಪಾರ್ಟಿಯ ರಾಷ್ಟ್ರೀಯ ಕಾರ್ಯಕಾರಿಣಿ ಅಧ್ಯಕ್ಷೆ ಪ್ರೀತಿ ಮೆನನ್ ಕೇಸ್ ದಾಖಲಿಸುವಂತೆ ಮುಂಬೈ ಪೊಲೀಸರಿಗೆ ಮನವಿ ಮಾಡಿದ್ದಾರೆ.