ಮಂಗಳೂರು: ಸುಮಾರು 30 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರದಲ್ಲಿ ಇದೀಗ ಅಕ್ರಮವಾಗಿ ಕ್ರೈಸ್ತ ಪ್ರಾರ್ಥನಾ ಮಂದಿರ ತೆರಯಲಾಗುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಕಾವೂರು ಘಟಕ ಕಾವೂರು ಠಾಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಂಜಿಮೊಗರು ವಾರ್ಡ್ ನ ಉರುಂದಾಡಿ ಎಂಬಲ್ಲಿ ಸುಮಾರು 30 ವರ್ಷಗಳಿಂದ ಕರ್ನಾಟಕ ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಸ್ಥಳೀಯ ಮಕ್ಕಳ ಶಿಕ್ಷಣಕ್ಕಾಗಿ ಅಂಗನವಾಡಿ ಕೇಂದ್ರ ಕಾರ್ಯಚರಿಸುತ್ತಿದ್ದು, ಇದೀಗ ಈ ಅಂಗನವಾಡಿ ಕೇಂದ್ರದಲ್ಲಿ ಸುಮಾರು 14 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕಿ ಅಂಗನವಾಡಿ ಕೇಂದ್ರವನ್ನು ಕ್ರಿಶ್ಚಿಯನ್ ಸಮುದಾಯದ ಪ್ರಾರ್ಥನ ಮಂದಿರವನ್ನಾಗಿ ಮಾರ್ಪಡು ಮಾಡುವ ಉದ್ದೇಶದಿಂದ ಅದರ ಹೊರಗೋಡೆಗೆ ಒಂದು ಬ್ಯಾನರ್ ಅಳವಡಿಸಿದ್ದಾರೆ.
ಶಿಕ್ಷಣ ಕೇಂದ್ರವನ್ನು ಮತಾಂತರ ಕೇಂದ್ರವನ್ನಾಗಿಸಲು ಪ್ರಯತ್ನಿಸಿ, ಸಮಾಜದಲ್ಲಿ ಕೋಮು ಸಾಮರಸ್ಯ ಕದಡುತ್ತಿರುವ, ಶಿಕ್ಷಣ ನೀತಿಗೆ ವ್ಯತಿರಿಕ್ತವಾಗಿ ನಡೆದುಕೊಂಡಿರುವ ಶಿಕ್ಷಕಿ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು, ಅಂಗನವಾಡಿ ಕೇಂದ್ರದಲ್ಲಿ ಅಳವಡಿಸಿರುವ ಬ್ಯಾನರ್ ಅನ್ನು ತೆರವುಗೊಳಿಸಿ, ಸ್ಥಳೀಯ ಮಕ್ಕಳ ಶಿಕ್ಷಣಕ್ಕೆ ಪೂರಕವಾಗಿ ಮಾಡಿಕೊಡುವಂತೆ ದೂರಿನಲ್ಲಿ ತಿಳಿಸಲಾಗಿದೆ.