ಬೆಂಗಳೂರು: ಉಡುಪಿಯ ‘ಪೇಜಾವರ ಶ್ರೀ’ಗಳ ಬಗ್ಗೆ ‘ನಾದಬ್ರಹ್ಮ’ ಡಾ.ಹಂಸಲೇಖ ನೀಡಿರುವ ಹೇಳಿಕೆಗೆ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿ, ಟೀಕೆಗೆ ಗುರಿಯಾಗಿತ್ತು. ಇದರಿಂದ ಎಚ್ಚೆತ್ತ ಹಂಸಲೇಖ, ತಮ್ಮ ಹೇಳಿಕೆಗೆ ಕ್ಷಮೆ ಕೇಳಿದ್ದಾರೆ. ಫೇಸ್ಬುಕ್ನಲ್ಲಿ ವಿಡಿಯೋ ಅಪ್ಲೋಡ್ ಮಾಡಿ ಕ್ಷಮೆ ಕೇಳಿದ್ದಾರೆ. ಖಾಸಗೀ ಚಾನೆಲ್ನ ಸಂಗೀತ ಕಾರ್ಯಕ್ರಮದಲ್ಲಿ ಮಹಾಗುರುವಿನ ಸ್ಥಾನ ಪಡೆದಿರುವ ಹಂಸಲೇಖ, ಕೊನೆಗೂ ಕ್ಷಮೆ ಕೇಳಿ ವಿವಾದಕ್ಕೆ ಫುಲ್ ಸ್ಟಾಪ್ ಇಡೋ ಪ್ರಯತ್ನ ಮಾಡಿದ್ದಾರೆ.
ಏನಂದಿದ್ರು ಹಂಸಲೇಖ..?
ನಾದಬ್ರಹ್ಮ ಹಂಸಲೇಖ ಅವರನ್ನ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಬಂದಿದ್ದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಹಂಸಲೇಖ..‘ಪೇಜಾವರ ಸ್ವಾಮಿಗಳು ದಲಿತರ ಮನೆಗೆ ವಾಸ್ತವ್ಯಕ್ಕೆ ಹೋಗಿದ್ದಾರೆ ಅಂತ ಸ್ಟೇಟ್‌ಮೆಂಟ್ ಬಂದಿದೆ. ಪೇಜಾವರ ಸ್ವಾಮಿಗಳು ದಲಿತರ ಮನೆಗೆ ಹೋಗಿ ಅಲ್ಲಿ ಕುಳಿತು ಕೊಳ್ಳಬಹುದಷ್ಟೇ, ಅವರು ಕೋಳಿ ಕೊಟ್ಟರೆ ತಿನ್ನೋಕೆ ಆಗುತ್ತದೆಯೇ? ಕೋಳಿ ಬೇಡ, ಕುರಿ ರಕ್ತದ ಫ್ರೈ ಮಾಡಿಕೊಟ್ಟರೆ ತಿಂತಾರಾ? ಲಿವರ್ ಫ್ರೈ ತಿಂತಾರಾ, ಆಗತ್ತಾ? ಅಂದರೆ, ದಲಿತರ ಮನೆಗೆ ಬಲಿತರು ಹೋಗೋದು ಏನ್ ದೊಡ್ಡ ವಿಷ್ಯಾ ಅಂತ ನಂಗ್ ಅನ್ನಿಸ್ತು ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಅಂತ ಶುರು ಮಾಡಿದ್ರು. ಈಗ ಎಲ್ಲರೂ ಗ್ರಾಮ ವಾಸ್ತವ್ಯ ಶುರು ಮಾಡಿದ್ದರು..’ ಎಂದಿದ್ದರು.
ಹಂಸಲೇಖರ ಮಾತಿಗೆ ಸಂಬಂಧಿಸಿ.. ನ.4 ರಂದು ಉಡುಪಿಯ ಬೀಡಿನಗುಡ್ಡೆಯಲ್ಲಿರುವ ಕಾಲೋನಿಯಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹಣತೆ ದೀಪ ಬೆಳಗಿ ದೀಪಾವಳಿ ಹಬ್ಬ ಆಚರಿಸಿದ್ದರು. ಬಳಿಕ ಅಲ್ಲಿನ ಪ್ರಾರ್ಥನಾ ಮಂದಿರಕ್ಕೆ ಭೇಟಿ ನೀಡಿ ದೇವರ ಸಾಲಂಕೃತ ಭಾವಚಿತ್ರಗಳಿಗೆ ಮಂಗಳಾರತಿ ಬೆಳಗಿ, ಕಾಲೋನಿ ನಿವಾಸಿಗಳು ಅರ್ಪಿಸಿದ ಭಕ್ತಿ ಗೌರವವನ್ನು ಸ್ವೀಕರಿಸಿ ಅನುಗ್ರಹ ಸಂದೇಶ ನೀಡಿದ್ದರು.